ಗಜಲ್

ಬಾನಲಿ ಹಾರುವ ಪತಂಗದ ನೂಲು ಕೆಳಗಿಟ್ಟಿರುವೆ ಶಿವಾ

ತೊಗಲು ಗೊಂಬೆಗಳ ಆಡಿಸುವ ಸೂತ್ರ ಮೇಲಿಟ್ಟಿರುವೆ ಶಿವಾ

ಕುರುಡು ಕಾಂಚಾಣವು ತಿಪ್ಪೆಯಲಿ ಬಿದ್ದು ಒದ್ದಾಡುತಿದೆ

ಹಸಿವು ಇಂಗಿಸುವ  ಆ ಶಕ್ತಿ ನೇಗಿಲಿಗೆ ಕೊಟ್ಟಿರುವೆ ಶಿವಾ

ಸಂತೆಯಲಿ ಜೀವಾನಿಲ ಸಿಗದೆ ಪ್ರಾಣಪಕ್ಷಿ ಬಿಕ್ಕುತಿದೆ

ಪ್ರಕೃತಿಯ ಒಡಲಲಿ ಪ್ರಾಣವಾಯು ಮುಚ್ಚಿಟ್ಟಿರುವೆ ಶಿವಾ

ಅವನಿಯ ಹುಳು ಹೆಮ್ಮೆಯಲಿ ಶಶಿ ಅಂಗಳದಲಿ ತೆವಳುತಿದೆ

ಇಳೆಯ ನಂದನವನ ನಾಶ ಮಾಡಿ ಮಸಣ  ಕಟ್ಟಿರುವೆ ಶಿವಾ

ಜಗದ ಸೃಷ್ಟಿಯ ಸೊಬಗು ಕಾಣದೆ “ಪ್ರಭೆ” ಯ ಮನ ನರಳುತಿದೆ

ಮುಗ್ಧ ಜೀವಿಗಳ ಬದುಕಿಗೆ  ಕಿಚ್ಚನ್ನು ಇಟ್ಟಿರುವೆ ಶಿವಾ

*ಪ್ರಭಾವತಿ ಎಸ್ ದೇಸಾಯಿ ವಿಜಯಪುರ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Recent Posts

Sign up for our Newsletter