ಅನಿತಾ ಪಿ.ತಾಕೊಡೆ ಅವರ ‘ನಿವಾಳಿಸಿ ಬಿಟ್ಟ ಕೋಳಿ’ ಹಾಗೂ ‘ಲೋಕಲ್ ಟ್ರೈನ್’ – ಜೂನ್ 18ರಂದು ಬಿಡುಗಡೆ

ಮುಂಬಯಿ: ಕರ್ನಾಟಕ ಸಂಘ ಡೊಂಬಿವಲಿ(ರಿ) ವಾಚನಾಲಯ ವಿಭಾಗದ ವತಿಯಿಂದ ಅನಿತಾ ಪಿ.ತಾಕೊಡೆ ಅವರು ಬರೆದಿರುವ ‘ನಿವಾಳಿಸಿ ಬಿಟ್ಟ ಕೋಳಿ’ ಹಾಗೂ ‘ಲೋಕಲ್ ಟ್ರೈನ್’ ಎರಡು ಕೃತಿಗಳು ಜೂನ್ 18ರಂದು ಭಾನುವಾರ ಮಂಜುನಾಥ ವಿದ್ಯಾಲಯದ ಮಂಜುನಾಥ ಸಭಾಗೃಹ, ಗೋಪಾಲ ನಗರ ಡೊಂಬಿವಲಿ ಪೂರ್ವದಲ್ಲಿ ಸಂಜೆ 4ರಿಂದ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷರಾದ ಸುಕುಮಾರ್ ಎನ್.ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಕೃತಿಗಳನ್ನು ಕರ್ನಾಟಕ ಮಲ್ಲ ಪತ್ರಿಕೆಯ ಉಪ ಸಂಪಾದಕರಾದ ಶ್ರೀನಿವಾಸ ಜೋಕಟ್ಟೆ ಹಾಗೂ ಕತೆಗಾರ ವಸಂತ ಕಲಕೋಟೆ ಅವರು ಬಿಡುಗಡೆಗೊಳಿಸಲಿದ್ದಾರೆ. ‘ನಿವಾಳಿಸಿ ಬಿಟ್ಟ ಕೋಳಿ’ ಕಥಾ ಸಂಕಲನವನ್ನು ಕವಿ ನಾಟಕಕಾರ ಸಾದಯಾ ಅವರು ಪರಿಚಯಿಸಲಿದ್ದಾರೆ. ‘ಲೋಕಲ್ ಟ್ರೈನ್’ ಅಂಕಣ ಬರಹಗಳ ಸಂಕಲನವನ್ನು ಕಂಠದಾನ ಕಲಾವಿದೆ ನಳಿನಾ ಪ್ರಸಾದ್ ಅವರು ಪರಿಚಯಿಸಲಿದ್ದಾರೆ.
ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಸಂಶೋಧನೆಯಲ್ಲಿ ನಿರತರಾಗಿದ್ದಾರೆ.
ಈಗಾಗಲೇ ಅನಿತಾ ಅವರ ಒಟ್ಟು 5 ಕೃತಿಗಳು ಲೋಕಾರ್ಪಣೆಗೊಂಡಿವೆ. ಇವರ ಕವನ ಸಂಕಲನ “ಅಂತರಂಗದ ಮೃದಂಗ” ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ “ಶ್ರೀಮತಿ ಸುಶೀಲಾ ಎಸ್ ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ”, “ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ” ಕೊಡಮಾಡುವ “ಅಲ್ಲಮ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಇವರ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
ಉದಯವಾಣಿಯ ಮಹಿಳಾ ಸಂಪದ ಮತ್ತು ಟೈಮ್ ಆಫ್ ಬೆದ್ರ ಪತ್ರಿಕೆಯಲ್ಲಿ ಇವರ ಅಂಕಣ ಬರಹಗಳು ಪ್ರಕಟವಾಗಿವೆ. ಕತೆ, ಕವನ, ಲೇಖನ, ಸಂದರ್ಶನ, ಪ್ರವಾಸ ಕಥನಗಳು, ಒಳನಾಡಿನ ಮತ್ತು ಹೊರನಾಡಿನ ಪತ್ರಿಕೆಯಲ್ಲಿ ನಿರಂತರವಾಗಿ ಪ್ರಕಟವಾಗುತ್ತಲಿವೆ. ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

*****

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Sign up for our Newsletter

Editor and Advisors/ Patrons

Prakash Rao Payyar

Chief Editor

Shri Manohar Thonse

-Abu Dhabi

Shri Prabhakar Kamath

- Dubai

Mallikarjuna Gowda

- Dubai

Prakash R.

- Dubai