ಜನವರಿ 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ ಸಮಾರಂಭ

ಶ್ರೀ ಜಯ ಸಿ. ಸುವರ್ಣ

ಶ್ರೀ ಜನಾರ್ದನ ಪೂಜಾರಿ

ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಜನಮನದ ನಾಯಕ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಅನಿತಾ ಪಿ. ತಾಕೊಡೆಯವರು ಬರೆದಿರುವ “ಸುವರ್ಣಯುಗ” ಗ್ರಂಥ ಜನವರಿ 14ರಂದು ಸಂಜೆ 4ಗಂಟೆಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ಲೋಕಾರ್ಪಣೆ ಗೊಳ್ಳಲಿದೆ. ಮಾಜಿ ಕೇಂದ್ರ ಸಚಿವರಾದ ಸನ್ಮಾನ್ಯ ಜನಾರ್ದನ ಪೂಜಾರಿ ಅವರು ಸುವರ್ಣಯುಗ ಗ್ರಂಥವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಾಡಿನ ಪ್ರತಿಷ್ಠಿತ ಗಣ್ಯರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು ಸೂರ್ಯಕಾಂತ್ ಜಯ ಸುವರ್ಣ ಮತ್ತು ಕುಟುಂಬಸ್ಥರು, ಅಭಿಮಾನಿಗಳು ಕಳಕಳಿಯಿಂದ ವಿನಂತಿಸಿಕೊಂಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Recent Posts

Sign up for our Newsletter