ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

ಮುಂಬಯಿ: ಕನ್ನಡ ಸಾಹಿತ್ಯ ಪರಿಷತ್ತು ಎರ್ಪಡಿಸಿದ 2022ನೆಯ ಸಾಲಿನ ಶ್ರೀ ಕೆ. ವಾಸುದೇವಾಚಾರ್ಯ ದತ್ತಿ ಪುರಸ್ಕಾರಕ್ಕೆ ಅನಿತಾ ಪಿ. ತಾಕೊಡೆಯವರ ‘ನಿವಾಳಿಸಿ ಬಿಟ್ಟ ಕೋಳಿ ಕಥಾ ಸಂಕಲನ’ ಆಯ್ಕೆಯಾಗಿದೆ.  2022ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ಒಟ್ಟು 51 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ 25 ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ ಆಯ್ಕೆ ಮಾಡಿತ್ತು. ನಾಡೋಜ ಡಾ.ಮಹೇಶ ಜೋಶಿಯವರ ನೇತೃತ್ವದ ಸಮಿತಿ ಪಾರದರ್ಶಕವಾಗಿ ಕೆಳಕಂಡ ಅಂತಿಮ ಪಟ್ಟಿಯನ್ನು ಆಯ್ಕೆ ಮಾಡಿದ್ದು ಶೀಘ್ರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಇವರ ಕವನ ಸಂಕಲನ “ಅಂತರಂಗದ ಮೃದಂಗ”ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ “ಶ್ರೀಮತಿ ಸುಶೀಲಾ ಎಸ್ ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ”, “ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ” ಕೊಡಮಾಡುವ “ಅಲ್ಲಮ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಇವರ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

2 thoughts on “ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ”

  1. ಹಾರ್ದಿಕ ಶುಭಾಷಯಗಳು ಹಾಗೂ ಅಭಿನಂದನೆಗಳು.
    ತಮ್ಮ ಸಾಹಿತ್ಯ ಕೃಷಿ ಹೀಗೆ ಮುಂದುವರೆಯಲಿ.

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Sign up for our Newsletter